ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶರಣಬಸವರಾಜ ಬಿಸರಹಳ್ಳಿ ನಿಧನ

0

ಸುವರ್ಣಪರ್ವ ಸುದ್ದಿ

ಕೊಪ್ಪಳ: ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಶಿಕ್ಷಕರಾದ ಶರಣಬಸವರಾಜ ಬಿಸರಹಳ್ಳಿ (94) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಮೃತರು ಐವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಶರಣ ಬಸವರಾಜ ಅವರು ಹೈದರಾಬಾದ್ ವಿಮೋಚನಾ ಹೋರಾಟದಲ್ಲಿ ಪಾಲ್ಗೊಂಡು, ನಿಜಾಮರ ಆಡಳಿತದಿಂದ ಹೈದರಾಬಾದ್ ಕರ್ನಾಟಕ ಭಾಗವನ್ನು ಮುಕ್ತಗೊಳಿಸಲು ಹೋರಾಟ ನಡೆಸಿದ್ದರು.

ಇಳಿವಯಸ್ಸಿಲ್ಲಿ ಕೂಡ ನಿರಂತರ ಅಧ್ಯಯನ ಮಾಡುತ್ತಿದ್ದ ಅವರು, ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಪಿಹೆಚ್ಡಿ ಪದವಿಗೆ ನೋಂದಣಿ ಮಾಡಿಸಿದ್ದರು‌. ಮೃತರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮ ಕೊಪ್ಪಳ ತಾಲೂಕಿನ ಬಿಸರಹಳ್ಳಿ ಗ್ರಾಮದಲ್ಲಿ ನೆರವೇರಲಿದೆ

Leave A Reply

Your email address will not be published.

error: Content is protected !!