ನಮ್ದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ|ರಾಯರೆಡ್ಡಿ ಶಾಸಕರಾಗೋದು ನಿಶ್ಚಿತ

0ಎಐಸಿಸಿಗೆ ನೂತನ ಸದಸ್ಯರಾಗಿ ರಾಯರಡ್ಡಿ ನೇಮಕಕ್ಕೆ ಹರ್ಷ


ಯಲಬುರ್ಗಾ:ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ (ಎಐಸಿಸಿ)ಗೆ ನೂತನ ಸದಸ್ಯರಾಗಿ ಮಾಜಿ ಸಚಿವರಾದ ಬಸವರಾಜ ರಾಯರಡ್ಡಿ ಅವರು ನೇಮಕಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೊಪ್ಪಳದಿಂದ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ್ ತಂಗಡಗಿ ಹಾಗೂ ಯಲಬುರ್ಗಾ ಕ್ಷೇತ್ರದ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರನ್ನು ನೂತನ ಎಐಸಿಸಿಗೆ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ಆದೇಶವನ್ನು ಹೊರಡಿಸಿದ್ದಾರೆ.


ರಾಯರೆಡ್ಡಿ ಅವರು ನೇಮಕವಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ರಾಯರಡ್ಡಿಗೆ ವಿವಿಧ ಹುದ್ದೆ: ಕೆಪಿಸಿಸಿ ಉಪಾಧ್ಯಕ್ಷರಾಗಿ, ಪ್ರಜಾಧ್ವನಿ ಯಾತ್ರೆಯ ಉತ್ತರ ಕರ್ನಾಟಕದ ಸಮನ್ವಯ ಸಮಿತಿಯ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಚುನಾವಣಾ ಆಯ್ಕೆ ಸಮಿತಿ ಸದಸ್ಯ, ಕಾಂಗ್ರೇಸ್ ಚುನಾವಣೆ ಪ್ರಣಾಳಿಕೆ ಸಮಿತಿಯ ಸದಸ್ಯ, ಹಾಗೆ ರಾಜ್ಯ ಕಾಂಗ್ರೆಸ್ ವಕ್ತಾರರಾಗಿ ಸೇರಿದಂತೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ರಾಯರೆಡ್ಡಿ ಅವರು ಅಲಂಕರಿಸಿದ್ದಾರೆ.


ಪಕ್ಷದ ಸಂಘಟನೆ ಆದ್ಯತೆ: ಎಐಸಿಸಿ ಸದಸ್ಯರಾಗಿ ನನ್ನನ್ನು ಆಯ್ಕೆ ಮಾಡಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ, ನನ್ನ ಮೇಲೆ ವಿಶ್ವಾಸ ಇಟ್ಟು ದೊಡ್ಡ ಈ ಸ್ಥಾನಮಾನ ನೀಡಿರುವುದು ಪಕ್ಷದ ಸಂಘಟನೆಗೆ ಶಕ್ತಿ ನೀಡಿದಂತಾಗಿದೆ. ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಗೆ ವ್ಯಾಪಕವಾಗಿ ಜನಮನ್ನಣೆ ಸಿಕ್ಕಿದೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಲಿದೆ.


ಮಾಜಿ ಸಿಎಂ ಸಿದ್ದರಾಮಯ್ಯನವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ಪಕ್ಷವನ್ನು ಅಧಿಕಾರಕ್ಕೆ ಬರಲಿದೆ. ಸುಭದ್ರ ಸರ್ಕಾರವನ್ನು ರಚಿಸಿ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಕೆಲಸವನ್ನು ಮಾಡುತ್ತೇವೆ ಎಂದು ಮಾಜಿ ಸಚಿವ ಬಸವರಾಜ ರಾಯರಡ್ಡಿ ಅವರು ತಿಳಿಸಿದರು.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಮಾಜಿ ಮಂತ್ರಿ ಬಸವರಾಜ ರಾಯರೆಡ್ಡಿ ಅವರ ಸಂಘಟನಾತ್ಮಕ ಶಕ್ತಿಯನ್ನು ಅರಿತು ಅವರನ್ನು ಎಐಸಿಸಿಗೆ ಸದಸ್ಯರಾಗಿ ಆಯ್ಕೆ ಮಾಡಿರುವುದು ನಿಜಕ್ಕೂ ಖುಷಿ ತಂದಿದೆ. ಅವರ ಪಕ್ಷ ನಿಷ್ಠೆ, ಪ್ರಾಮಾಣಿಕತೆಗೆ ಈ ಹುದ್ದೆ ಒಲಿದು ಬಂದಿದೆ. ಈ ಬಾರಿ ರಾಜ್ಯದಲ್ಲಿ ನಮ್ದೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು ಹಾಗೆ ಯಲಬುರ್ಗಾ ಕ್ಷೇತ್ರದಲ್ಲಿ ಬಸವರಾಜ ರಾಯರೆಡ್ಡಿ ಅವರು ಶಾಸಕರಾಗೋದು ನಿಶ್ಚಿತವಾಗಿದೆ ಎಂದು ಉಳ್ಳಾಗಡ್ಡಿ ಅವರು ಹೇಳಿದರು.

Leave A Reply

Your email address will not be published.

error: Content is protected !!