ಮನೆ-ಮನೆಗೆ ಗ್ಯಾರಂಟಿ ಕಾರ್ಡ್ ತಲುಪಿಸಿದ ಕಾಂಗ್ರೆಸ್ ಯುವ ಮುಖಂಡ

0

ಸುವರ್ಣಪರ್ವ ಸುದ್ದಿ

ಗಂಗಾವತಿ : ಕಾಂಗ್ರೆಸ್ ಪಕ್ಷದ ಪ್ರಮುಖ ಪ್ರಣಾಳಿಕೆಯಾದ ಗೃಹ ಜ್ಯೋತಿ, ಗೃಹ ಲಕ್ಷ್ಮೀ ಯೋಜನೆಗಳ ಗ್ಯಾರಂಟಿ ಕಾರ್ಡ್ ನ್ನು ಗಂಗಾವತಿಯ ಕಾಂಗ್ರೆಸ್ ಪಕ್ಷದ ಯುವ ಮುಖಂಡ ದಾದು ಮನೆ-ಮನೆಗೆ ತಲುಪಿಸಿ ಕಾಂಗ್ರೆಸ್ ಬೆಂಬಲಿಸಿ ಎಂದು ಮನವಿ ಮಾಡಿದರು.

ನಗರದ 19 ನೇ ವಾರ್ಡಿನಲ್ಲಿ ಕಾಂಗ್ರೆಸ್ ಯುವ ಮುಖಂಡ ದಾದು ನೇತೃತ್ವದಲ್ಲಿ ಇನ್ನೀತರ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಿಸಿದರು.


ಬಳಿಕ ಮಾತನಾಡಿದ ದಾದು, ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರಗಳು ಜನರ ಮೂಗಿಗೆ ತುಪ್ಪ ಹಚ್ಚುವಂತ ಕೆಲಸ ಮಾಡುತ್ತಿವೆ. ಇವರ ಅಭಿವೃದ್ಧಿ ಕಾರ್ಯ ಶೂನ್ಯವಾಗಿದೆ ಬಿಜೆಪಿಗೆ ಜನರು ತಕ್ಕಪಾಠ ಕಲಿಸಿ, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದರು.

ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಈ ಬಾರೀ ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿಯವರ ಗೆಲುವು ಶತಸಿದ್ದ ಎಂದರು. ಈ ಸಂಧರ್ಭದಲ್ಲಿ ಮುಖಂಡರಾದ ಗೌಸ್, ಜಮೀರ್, ಇಮ್ರಾನ್, ಚತ್ರುದ್ದಿನ್, ಮುನ್ನಾ, ರಾಜ ಸೇರಿದಂತೆ ಮತ್ತಿತರರು ಇದ್ದರು

Leave A Reply

Your email address will not be published.

error: Content is protected !!